ಅಭಿಪ್ರಾಯ / ಸಲಹೆಗಳು

ಗಂಗಾ ಕಲ್ಯಾಣ ಯೋಜನೆ

 

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ

 

ಗಂಗಾ ಕಲ್ಯಾಣ ಯೋಜನೆಯು 1983 ರಿಂದ ಪ್ರಾರಂಭವಾಗಿದೆ. ಗಂಗಾ ಕಲ್ಯಾಣ ಯೋಜನೆಯು ಕರ್ನಾಟಕ ಘನ ಸರ್ಕಾರದ ಸಾಮಾಜಿಕ ಜವಾಬ್ದಾರಿಯಾಗಿದ್ದು, ಸದರಿ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವಿಶ್ವಕರ್ಮ, ಭೋವಿ ಮತ್ತು ಅಲ್ಪಸಂಖ್ಯಾತ ರೈತರ ಕೃಷಿ ನೀರಾವರಿ ಪಂಪುಸೆಟ್ಟುಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ಗಂಗಾ ಕಲ್ಯಾಣ ಯೋಜನೆಯು 6 ಅಭಿವೃದ್ದಿ ನಿಗಮಗಳನ್ನು ಒಳಗೊಂಡಿದೆ.

 

 1. ಡಾ|| ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ (ಪರಿಶಿಷ್ಟ ಜಾತಿ)

 2. ಕರ್ನಾಟಕ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ (ಪರಿಶಿಷ್ಟ ಪಂಗಡ)

 3. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ

 4. ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ

 5. ಕರ್ನಾಟಕ ವಿಶ್ವ ಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ

 6. ಭೋವಿ ಸಮುದಾಯಗಳ ಅಭಿವೃದ್ಧಿ ನಿಗಮ

 
ಈ ಯೋಜನೆಯಡಿ ಫಲಾನುಭವಿಗಳನ್ನು ಸಂಬಂಧಪಟ್ಟ ಅಭಿವೃದ್ದಿ ನಿಗಮಗಳು ಗುರುತಿಸಿ, ಜಿಲ್ಲಾ ವ್ಯವಸ್ಥಾಪಕರು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಸಹಿ ಮತ್ತು ಮೊಹರಿನೊಂದಿಗೆ ಹೆಸ್ಕಾಂನ ಉಪ ವಿಭಾಗಗಳಿಗೆ ಅರ್ಜಿಗಳನ್ನು ನೊಂದಣಿ ಮಾಡುತ್ತಾರೆ. ಅರ್ಜಿಯನ್ನು ನೊಂದಣಿ ಮಾಡಿದ ಮೇಲೆ, ಹೆಸ್ಕಾಂನ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅಂದಾಜುಪಟ್ಟಿಯನ್ನು ತಯಾರಿಸಿ, ವಿದ್ಯುತ್ ಸಂಪರ್ಕ ನೀಡಲು ಠೇವಣಿ ವಿವರಗಳನ್ನೊಳಗೊಂಡ ಮಂಜುರಾತಿ ಪತ್ರವನ್ನು ಫಲಾನುಭವಿ ಹಾಗೂ ಸಂಬಂದಪಟ್ಟ ಅಭಿವೃದ್ದಿ ನಿಗಮಗಳಿಗೆ ಸಲ್ಲಿಸುತ್ತಾರೆ. ಎಲ್ಲಾ ಅಭಿವೃದ್ಧಿ ನಿಗಮದವರಿಗೂ ವೈಯಕ್ತಿಕ ಫಲಾನುಭವಿಗಳಿಗೆ ಪಾವತಿ ಮಾಡಬೇಕಾಗಿರುವ ಠೇವಣಿ ವಿವರಗಳನ್ನೊಳಗೊಂಡ ವಿದ್ಯುತ್ ಮಂಜೂರಾತಿ ಪತ್ರವನ್ನು ನೀಡಲಾಗುವುದು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು.

 

ವರ್ಷ ವಿದ್ಯುದ್ದೀಕರಣಗೊಂಡ ಕೊಳವೆ ಬಾವಿಗಳ ಸಂಖ್ಯೆ
2010-11 4001
2011-12 1767
2012-12 2909
2013-14 5316
2014-15 2509
2015-16 3755
2016-17 5440
2017-18 6228
2018-19 6289
2019-20 3722

 

 

 

 

 

 

ಇತ್ತೀಚಿನ ನವೀಕರಣ​ : 03-08-2020 04:34 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080